2nd PUC Exam: ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪರೀಕ್ಷೆ ಬರೆಯಲು ಅನಾನುಕೂಲ ಆದ ವಿದ್ಯಾರ್ಥಿಗಳಿಗೆ ಸರ್ಕಾರವು ಎರಡು ಮತ್ತು ಮೂರನೇ ಹಂತದಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಇಂಥ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಎರಡು ಮತ್ತು ಮೂರನೇ ಪರೀಕ್ಷೆ ಬರೆಯಲು ಸಂಪೂರ್ಣ ಶುಲ್ಕ ವಿನಾಯಿತಿಯನ್ನು ಘೋಷಿಸಿದೆ.
Sponsored
Marriage AdSponsoredಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ. ಪಿಯು ಪರೀಕ್ಷೆ – 2 ಏಪ್ರಿಲ್ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್ 9 ರಿಂದ ಏಪ್ರಿಲ್ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದಾರೆ.




