Home News Free Bus: ಉಚಿತ ಬಸ್ ಪ್ರಯಾಣಕ್ಕೆ ಇನ್ನು ಆಧಾರ್ ಬೇಡ !!

Free Bus: ಉಚಿತ ಬಸ್ ಪ್ರಯಾಣಕ್ಕೆ ಇನ್ನು ಆಧಾರ್ ಬೇಡ !!

Hindu neighbor gifts plot of land

Hindu neighbour gifts land to Muslim journalist

Free Bus: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳ ಪೈಕಿ ‘ಶಕ್ತಿ ಯೋಜನೆ’ಯ ಉಚಿತ ಬಸ್ ಪ್ರಯಾಣ ಕೂಡ ಒಂದು. ಈ ಯೋಜನೆಯಡಿ ರಾಜ್ಯಾದ್ಯಂತ ಕೋಟ್ಯಾಂತರ ಮಹಿಳೆಯರು ಪ್ರತಿನಿತ್ಯ ಉಚಿತವಾಗಿ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ.

ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ವೇಳೆ ಗುರುತಿಗಾಗಿ ಆಧಾರ್ ಕಾರ್ಡನ್ನು ತೋರಿಸುತ್ತಿದ್ದರು. ಆದರೆ ಇನ್ನು ಮುಂದೆ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬೇಡ ಎಂದು ಹೇಳಲಾಗುತ್ತಿದೆ. ಕಾರಣ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ. ಹೌದು, ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ.

ಅಂದಹಾಗೆ ಈ ಸ್ಮಾರ್ಟ್ ಕಾರ್ಡ್‌ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ.

ಸ್ಮಾರ್ಟ್ ಕಾರ್ಡ್ ಎಲ್ಲಿ ಪಡೆಯಬೇಕು?
ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್‌ಸೈಟ್‌ ಬಳಸಿ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ ಪ್ರಿಂಟ್‌ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ. ಮಾಸಿಕ ಪಾಸ್ ಅಥವಾ ಕಾರ್ಡ್ ವಿತರಣೆ ಇಲ್ಲ. ಇದು ಶಾಶ್ವತ ಪಾಸ್‌ನಂತೆ ಕಾರ್ಯನಿರ್ವಹಿಸುತ್ತದೆ.