

Bengaluru: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ವಿರಳ. ಆದ್ದರಿಂದ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇನ್ನು ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿರುವ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಅವರು, ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.













