Home latest ಆ.31 ರಂದು ಪ್ರಾಣಿವಧೆ ಮಾಂಸ ಮಾರಾಟ ನಿಷೇಧ…!

ಆ.31 ರಂದು ಪ್ರಾಣಿವಧೆ ಮಾಂಸ ಮಾರಾಟ ನಿಷೇಧ…!

Hindu neighbor gifts plot of land

Hindu neighbour gifts land to Muslim journalist

ಆಗಸ್ಟ್ 31 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ಮಾರ್ಚ್ 31 ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ತಿಂಗಳ ಕೃಷ್ಣ ಜನ್ಮಾಷ್ಟಮಿಯಂದು ಕೂಡ ಮಾಂಸ ಮಾರಾಟ ಮತ್ತು ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು.

ಗಣೇಶ ಮೂರ್ತಿ ಕೂರಿಸಲು ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಏರಿಯಾ ಎಂದು 3 ರೀತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಚಾಮರಾಜಪೇಟೆ, ಚಂದ್ರಾಲೇಔಟ್, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಗೋವಿಂದಪುರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. 24 ಗಂಟೆಯೂ ಇಂತಹ ಏರಿಯಾಗಳಲ್ಲಿ ಭದ್ರತೆ ಇರಲಿದ್ದು, 3 ಪಾಳಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಪೊಲೀಸ್‌ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಆಯೋಜಕರು ಗಣೇಶ ಪ್ರತಿಷ್ಟಾಪನೆಗೆ ಬಿಬಿಎಂಪಿಯ ಏಕಗವಾಕ್ಷಿ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದೆ.