Home Education ಗಮನಿಸಿ : 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲ ಸ್ಕಾಲರ್‌ಶಿಪ್-ಕೇಂದ್ರ ಸರ್ಕಾರದಿಂದ ಆದೇಶ

ಗಮನಿಸಿ : 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲ ಸ್ಕಾಲರ್‌ಶಿಪ್-ಕೇಂದ್ರ ಸರ್ಕಾರದಿಂದ ಆದೇಶ

Hindu neighbor gifts plot of land

Hindu neighbour gifts land to Muslim journalist

ಶಿಕ್ಷಣ ಇಲಾಖೆ ಮಂಡಳಿಯ ಪರವಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಒಂದನ್ನು ಜಾರಿ ಮಾಡಲಾಗಿದೆ. ಹೌದು ಕೇಂದ್ರ ಸರ್ಕಾರವು 2022-23ನೇ ಸಾಲಿನಿಂದ 1 ರಿಂದ 8ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಲಿದೆ.

ಈ ಮೇಲಿನ ಆದೇಶ ಕುರಿತು ಸ್ಪಷ್ಟನೆಯನ್ನು ಶಿಕ್ಷಣ ಮಂಡಳಿ ನೀಡಿದೆ. ಅದಲ್ಲದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದೆ.

ಪ್ರಸ್ತುತ ಶಿಕ್ಷಣ ಹಕ್ಕು ಕಾಯ್ದೆಯಡಿ 8 ನೇ ತರಗತಿಯವರೆಗೆ ಮಾತ್ರವೇ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆಯಲಿದೆ ಎಂದು ಪ್ರತಿಪಾದಿಸಿದೆ. ಇದಕ್ಕೂ ಮೊದಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಸೌಲಭ್ಯ ಅಲ್ಪಸಂಖ್ಯಾತ ಸಮುದಾಯದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ದೊರೆಯುತ್ತಿತ್ತು.
ಇನ್ನು ಮುಂದೆ 9 ಮತ್ತು 10ನೇ ತರಗತಿಗಳು ಪ್ರೌಢ ಶಾಲೆಗಳಲ್ಲ ಎಂದು ಶಿಕ್ಷಣ ಇಲಾಖೆ ಮಂಡಳಿಯಿಂದ ಆದೇಶ ನೀಡಿದೆ.

ಶಿಕ್ಷಣ ಹಕ್ಕು ಕಾಯ್ದೆ 2009ರ ಅನ್ವಯ ಪ್ರತಿ ಮಗುವಿಗೂ 1 ರಿಂದ 8ನೇ ತರಗತಿವರೆಗೂ ಮಾತ್ರ ಉಚಿತ ಶಿಕ್ಷಣ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದಿದೆ. ಅದರಂತೆ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಅನುಕೂಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ದೊರೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ಪರಿಶೀಲಿಸಬೇಕು ಎಂದು ರಾಜ್ಯ, ಜಿಲ್ಲಾ ನೋಡಲ್ ಅಧಿಕಾರಿಗಳಿಗೂ ಇಲಾಖೆ ಸೂಚಿಸಿದೆ. ಆದರೆ ಈ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಸರ್ಕಾರ ತನ್ನ ಆದೇಶವನ್ನು ಇನ್ನು ಮುಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಾತ್ರವೇ ಪೂರ್ಣ ಪ್ರಮಾಣದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಹರಾಗಿರುತ್ತಾರೆ. ಈ ಮೇಲಿನ ಕುರಿತು ಹೇಳಿಕೆ ನೀಡಿರುವ ಕೇಂದ್ರ ಸರ್ಕಾರವು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.