Home News BJP: ಹೈಕಮಾಂಡ್ ನಿಂದ ನೋಟಿಸ್ – ಖಡಕ್ ಉತ್ತರ ಕೊಟ್ಟ ಯತ್ನಾಳ್!!

BJP: ಹೈಕಮಾಂಡ್ ನಿಂದ ನೋಟಿಸ್ – ಖಡಕ್ ಉತ್ತರ ಕೊಟ್ಟ ಯತ್ನಾಳ್!!

Hindu neighbor gifts plot of land

Hindu neighbour gifts land to Muslim journalist

BJP: ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿ ನೋಟಿಸ್ ನೀಡಿತ್ತು. ಈ ಬೆನ್ನಲ್ಲೇ ಕೆರಳಿರುವ ಯತ್ನಾಳ್ ಬಣ ಹೈಕಮಾಂಡ್ ಗೆ ಖಡಕ್ ಉತ್ತರವನ್ನು ರವಾನಿಸಿದೆ.

ಹೌದು, ನೋಟಿಸ್​ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ನನಗೆ ಯಾವುದೇ ನೋಟಿಸ್​ ಬಂದಿಲ್ಲ. ನೋಟಿಸ್​ ಬಂದಮೇಲೆ ಕೆಲ ವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕ ಭಾಗದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ವೈಫಲ್ಯಗಳನ್ನು ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.