Home News ಅ.7 ರಿಂದ ಅ.16 : ಮಂಗಳೂರು ದಸರಾ ಮಹೋತ್ಸವ

ಅ.7 ರಿಂದ ಅ.16 : ಮಂಗಳೂರು ದಸರಾ ಮಹೋತ್ಸವ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ಅ. 7ರಿಂದ 16ರ ತನಕ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಡೆಯಲಿದೆ.

ಸರಕಾರದ ಮಾರ್ಗಸೂಚಿ ಪ್ರಕಾರ ನಡೆಸುವಂತೆ ಜಿಲ್ಲಾಧಿಕಾರಿಗಳು ಕ್ಷೇತ್ರಾಡಳಿತ ಮಂಡಳಿಗೆ ಸಲಹೆ ನೀಡಿದ್ದು, ಅದರಂತೆಯೇ ಆಚರಿಸಲಾಗುವುದು ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶಾರದಾ ಮೂರ್ತಿ ವಿಸರ್ಜನೆ ಯಂದು ಮೆರವಣಿಗೆ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳು ಯಥಾವತ್ತಾಗಿ ನೆರವೇರಲಿವೆ. ಅನ್ನ ಸಂತರ್ಪಣೆ ಅಂಗವಾಗಿ ಕಳೆದ ಬಾರಿಯಂತೆ ಪ್ರಸಾದ ರೂಪದಲ್ಲಿ ಅನ್ನ ವಿತರಣೆ ಪ್ರತಿನಿತ್ಯ ಮಧ್ಯಾಹ್ನ 12.30ರಿಂದ 2.30ರ ತನಕ ಇರಲಿದೆ ಎಂದು ತಿಳಿಸಿದರು.