ಸೋಮವಾರ, 26 ಅಕ್ಟೋಬರ್ 2026
Trending

ತುಳು ಭಾಷೆಗೆ ಅಧಿಕೃತ ಭಾಷಾ ಮಾನ್ಯತೆ ಹಾಗೂ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಕ್ಷಿತ್ ಶಿವರಾಂ ಅಭಿನಂದನೆ

Rakshith Shivaram
Advertisement

ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಘೋಷಿಸಿದ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Sponsored

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕರಾವಳಿ ಭಾಗದ ಸಾಂಸ್ಕೃತಿಕ ಅಸ್ಮಿತೆ ಹಾಗೂ ಕೋಟ್ಯಂತರ ತುಳು ಭಾಷಿಕರ ಭಾವನೆಯಾಗಿದ್ದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರೊಂದಿಗೆ ಕನ್ಯಾಡಿಯ ಪುಣ್ಯಕ್ಷೇತ್ರವಾದ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಸರ್ಕಾರವು ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ವಿಶೇಷ ಗೌರವ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement
Advertisement

“ಕರಾವಳಿ ಮಣ್ಣಿನಲ್ಲಿ ನಡೆದ ಈ ವಿಶೇಷ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ತುಳುನಾಡಿನ ಜನರ ದಶಕಗಳ ಕಾಲದ ಹೋರಾಟ ಮತ್ತು ಆಶಯಗಳಿಗೆ ಸೂಕ್ತವಾಗಿ ಸ್ಪಂದಿಸಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಬೆಳೆಸಲು ಪ್ರಮುಖ ಮೈಲಿಗಲ್ಲಾಗಲಿದೆ” ಎಂದು ಅವರು ತಿಳಿಸಿದ್ದಾರೆ.

ತುಳು ಭಾಷಾ ಮಾನ್ಯತೆಗಾಗಿ ಶ್ರಮಿಸಿದ ಕರಾವಳಿ ಭಾಗದ ಭಾಷಾ ಪ್ರೇಮಿಗಳು, ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕನ್ಯಾಡಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ರಕ್ಷಿತ್ ಶಿವರಾಂ ಅವರು ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸಿದ್ದಾರೆ

ರಕ್ಷಿತ್ ಶಿವರಾಂ
ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC)

Advertisement
div class="ere-sticky">