ಸೋಮವಾರ, 26 ಅಕ್ಟೋಬರ್ 2026
Trending

ಒಲಂಪಿಕ್ ವಿಜೇತೆ ಮನು ಭಾಕರ್ ಕೋಚ್, ಜಸ್ಪಾಲ್ ರಾಣಾ 49ನೇ ವಯಸ್ಸಿಗೆ ನಿಧನ!!

ಭಾರತದ ಖ್ಯಾತ ಶೂಟಿಂಗ್ ಕೋಚ್ ಹಾಗೂ ಮಾಜಿ ಶೂಟರ್ ಜಸ್ಪಾಲ್ ರಾಣಾ ಅವರು ಅನಾರೋಗ್ಯದಿಂದ 49ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 

Sponsored

ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ಹಿಂದಿರುಗುವಾಗ ಅನಾರೋಗ್ಯಕ್ಕೊಳಗಾಗಿದ್ದರು. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

Advertisement
Advertisement

ರಾಣಾ ಅವರು 1990ರ ದಶಕದಲ್ಲಿ ಶೂಟಿಂಗ್ ಕ್ರೀಡೆಯಲ್ಲಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದರು. ಅವರ ಏಷ್ಯನ್ ಕ್ರೀಡಾಕೂಟದಲ್ಲಿ ನಾಲ್ಕು ಬಾರಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ ಮತ್ತು ಒಂಬತ್ತು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಅವರು ಒಮ್ಮೆ ಏಷ್ಯನ್ ಚಾಂಪಿಯನ್‌ಶಿಪ್ ಪ್ರಶಸ್ತಿ ಸಹ ಗೆದ್ದುಕೊಂಡಿದ್ದಾರೆ ಮತ್ತು 1994ರಲ್ಲಿ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಜೂನಿಯರ್ ವಿಶ್ವ ಚಾಂಪಿಯನ್ ಸಹ ಆಗಿದ್ದರು. ಜಸ್ಪಾಲ್ ರಾಣಾ 2006ರಲ್ಲಿ ಏಷ್ಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿದರು, ನಂತರ ಶೂಟಿಂಗ್‌ನಿಂದ ನಿವೃತ್ತರಾದರು.

ಅವರ ಸಾವು ಭಾರತೀಯ ಶೂಟಿಂಗ್‌ಗೆ ಭರಿಸಲಾಗದ ನಷ್ಟವಾಗಿದೆ. ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಚಾಂಪಿಯನ್ ಕ್ರೀಡಾಪಟು ಮತ್ತು ತರಬೇತುದಾರರಾಗಿದ್ದರು. ರಾಣಾ ಹಲವಾರು ವರ್ಷಗಳ ಕಾಲ ಭಾರತವನ್ನು ವಿಶಿಷ್ಟವಾಗಿ ಪ್ರತಿನಿಧಿಸಿದರು ಮತ್ತು ದೇಶದಲ್ಲಿ ಕ್ರೀಡೆ ಇನ್ನೂ ಅಭಿವೃದ್ಧಿ ಹೊಂದುತ್ತಿರುವ ಸಮಯದಲ್ಲಿ ಶೂಟಿಂಗ್ ಅನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

Advertisement