ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. “ಪ್ರತಿ ಜಿಲ್ಲೆ ಒಂದು ದಿನ ಒಂದು ಬೇಡಿಕೆ” ಎಂಬ ಘೋಷವಾಕ್ಯದೊಂದಿಗೆ, ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುವಂತೆ ಸಿಜೆಪಿ (CJP) ಕರೆ ನೀಡಿದೆ. ಪರೀಕ್ಷಾ ಸುಧಾರಣೆಗಳ ಕುರಿತು ಸರ್ಕಾರವು ಭರವಸೆಗಳನ್ನು ನೀಡಿದ್ದರೂ, ಸಚಿವ ಪ್ರಧಾನ್ ಅವರ ರಾಜೀನಾಮೆಯೇ ತಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ಪ್ರತಿಪಾದಿಸಿರುವ ಸಂಘಟನೆಯ ನಾಯಕರು, ಇಂದು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.




