ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ, ವೇಣೂರು ಇಲ್ಲಿ ದಿನಾಂಕ 30 ಜೂನ್ 2026 ರಂದು ರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
Sponsoredಕಾರ್ಯಕ್ರಮವು ಪೂಜ್ಯ ಖಾವಂದರು ಹಾಗೂ ಮಾತೃಶ್ರೀವರ ಶುಭಾಶೀರ್ವಾದ ಮತ್ತು ಹಿತನುಡಿಯೊಂದಿಗೆ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀನಿವಾಸ ನಾಯ್ಕ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ನಾಗರಿಕರಾಗಿ ಶಿಸ್ತುಬದ್ಧ ಜೀವನವನ್ನು ನಡೆಸಬೇಕೆಂದು ಕರೆ ನೀಡಿದರು.
Marriage AdSponsoredವೇಣೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ಶ್ರೀಮತಿ ಒಮನ ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳು ಹಾಗೂ ಅವುಗಳ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವನ್ನು ವಿವರಿಸಿದರು. ಗುರುವಾಯನಕೆರೆ ಜನಜಾಗೃತಿ ಕಾರ್ಯಕ್ರಮದ ತಾಲೂಕು ಅಧ್ಯಕ್ಷರಾದ ಶ್ರೀ ಗಿರೀಶ್ ಕೆ. ಎಸ್. ಅವರು ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರದ ಮಹತ್ವವನ್ನು ತಿಳಿಸಿದರು. ವೇಣೂರು ವಲಯ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶ್ರೀಮತಿ ಸುಜಾತಾ ಅವರು ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜವಾಬ್ದಾರಿಯುತ ಹಾಗೂ ಶಿಸ್ತುಬದ್ಧ ಜೀವನ ನಡೆಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಎಸ್.ಪಿ. ಡಾ. ವೆಂಕಟೇಶ್ ಪ್ರಸನ್ನ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ವಿಡಿಯೋ ಸಂದೇಶಗಳ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯಕರ, ವ್ಯಸನಮುಕ್ತ ಜೀವನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಮನೋಜ್ ಎಸ್. ಅವರು ಸ್ವಾಗತ ಭಾಷಣ ಮಾಡಿದರು. ವಾಣಿಜ್ಯ ವಿಭಾಗದ ಕುಮಾರಿ ಶರಣ್ಯ ಕೆ. ಎಸ್. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ಅಭಿಲಾಷ್ ಕಾಮತ್ ಅವರು ವಂದನಾರ್ಪಣೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ ವೃಂದದವರು ಆನ್ಲೈನ್ ಮೂಲಕ ಸಕ್ರಿಯವಾಗಿ ಭಾಗವಹಿಸಿ, ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ, ಶಿಸ್ತುಬದ್ಧ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.



