Home News ಶಸ್ತ್ರಚಿಕಿತ್ಸೆಯ ಬಳಿಕ ಕೊನೆಯುಸಿರೆಳೆದ ಮತ್ತೊಬ್ಬ ಸುಂದರಿ !!

ಶಸ್ತ್ರಚಿಕಿತ್ಸೆಯ ಬಳಿಕ ಕೊನೆಯುಸಿರೆಳೆದ ಮತ್ತೊಬ್ಬ ಸುಂದರಿ !!

Hindu neighbor gifts plot of land

Hindu neighbour gifts land to Muslim journalist

ಇತ್ತೀಚೆಗೆ ಹಲವಷ್ಟು ಮಾಡೆಲ್ ಗಳು, ಕಿರುತೆರೆ ನಟಿಯರು ಆತ್ಮಹತ್ಯೆಗೆ ಶರಣಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ನಡುವೆ ಆಪರೇಷನ್ ಒಳಗಾಗಿ ಕೆಲವರು ರೂಪ ಕಳೆದುಕೊಂಡಿದ್ದರ ಜೊತೆಗೆ ಜೀವವನ್ನು ಕಳೆದುಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತೆಯೇ ಇದೀಗ ಟಾನ್ಸಿಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 27 ವಯಸ್ಸಿನ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ಮೆದುಳಿನ ರಕ್ತಸ್ರಾವ ಮತ್ತು ಹೃದಯಾಘಾತದಿಂದ ಚಿಕ್ಕವಯಸ್ಸಿನಲ್ಲೇ ನಿಧನರಾಗಿದ್ದಾರೆ.

2018 ರಲ್ಲಿ ಮಿಸ್ ಯುನೈಟೆಡ್ ಕಾಂಟಿನೆಂಟ್ಸ್ ಬ್ರೆಜಿಲ್ ಕಿರೀಟವನ್ನು ಪಡೆದ Ms ಕೊರಿಯಾ ಅವರು ಖಾಸಗಿ ಕ್ಲಿನಿಕ್‌ನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಆಕೆಯ ಟಾನ್ಸಿಲ್ ಗಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಕೆಲವು ದಿನಗಳ ನಂತರ ಆಕೆಗೆ ಭಾರೀ ರಕ್ತಸ್ರಾವವಾಯಿತಲ್ಲದೇ ಹೃದಯಾಘಾತ ಸಂಭವಿಸಿತು.
ಗ್ಲೇಸಿ ಕೊರಿಯಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೊರಿಯಾ ಅವರು ಮಾಡೆಲ್, ಬ್ಯೂಟಿಷಿಯನ್ ಕೂಡ ಆಗಿದ್ದರು. ಇನ್ ಸ್ಟಾಗ್ರಾಮ್ ನಲ್ಲಿ 56,000ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ರಿಯೊ ಡಿ ಜನೈರೊದಿಂದ ಈಶಾನ್ಯಕ್ಕೆ 120 ಮೈಲಿ ದೂರದಲ್ಲಿರುವ ಬ್ರೆಜಿಲ್‌ನ ಅಟ್ಲಾಂಟಿಕ್ ಕರಾವಳಿಯಲ್ಲಿರುವ ಮಕೇ ಎಂಬ ನಗರದಲ್ಲಿ ಜನಿಸಿದ್ದಳು. ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡುತ್ತಿರುವ ಕೊರಿಯಾ ನೆರೆಹೊರೆಯ ಬ್ಯೂಟಿ ಸಲೂನ್ ನಲ್ಲಿ ಉಗುರು ಹಸ್ತಾಂಲಕಾರ ಕೆಲಸ ಕೂಡ ನಿರ್ವಹಿಸುತ್ತಿದ್ದಳು ಎಂದು ತಿಳಿದುಬಂದಿದೆ.