Home News Operation Sindhoora: ಮುಜರಾಯಿ ವ್ಯಾಪ್ತಿಯ ದೇಗುಲಗಳಲ್ಲಿ ಇಂದು ಪೂಜೆ

Operation Sindhoora: ಮುಜರಾಯಿ ವ್ಯಾಪ್ತಿಯ ದೇಗುಲಗಳಲ್ಲಿ ಇಂದು ಪೂಜೆ

Hindu neighbor gifts plot of land

Hindu neighbour gifts land to Muslim journalist

Operation Sindhoora: ಆಪರೇಷನ್ ಸಿಂದೂರ ಯಶಸ್ವಿ ಹಿನ್ನೆಲೆ ಸೂಚನೆ ದೇಶದ ಸೈನಿಕರಿಗೆ ಶಕ್ತಿ ನೀಡಲು ವಿಶೇಷ ಪೂಜೆ. ಭಾರತೀಯ ಸೇನೆ ಪರ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಕೆ. ಪಹಲ್ಗಾಂ ದಾಳಿಗೆ ಉತ್ತರವಾಗಿ ಬೆಳಗ್ಗೆ ಭಾರತ ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ‘ಆಪರೇಷನ್ ಸಿಂದೂರ’ ಸೇನಾ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಗುರುವಾರ ವಿಶೇಷ ಪೂಜೆ ನಡೆಸಲು ಸೂಚಿಸಿದೆ.

ಬೆಂಗಳೂರಿನ ಹನುಮಂತನಗರ ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 8.30 ರಿಂದ 9 ಗಂಟೆ ಹಾಗೂ ಬನಶಂಕರಿ ದೇವಸ್ಥಾನದಲ್ಲಿ ಬೆಳಗ್ಗೆ 10.30 ರಿಂದ 11 ಗಂಟೆವರೆಗೆ ವಿಶೇಷ ಪೂಜೆ ಸಲ್ಲಿಸಲು ತಿಳಿಸಲಾಗಿದೆ. ಅದರಂತೆ ರಾಜ್ಯದ ಮುಜರಾಯಿ ವ್ಯಾಪ್ತಿ ದೇವಸ್ಥಾನಗಳಲ್ಲೂ ಪೂಜೆ ನಡೆಯಲಿದೆ.

ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗಾಗಿ ಸೈನಿಕರಿಗೆ ಆರೋಗ್ಯ, ಶಕ್ತಿ ನೀಡುವಿಕೆಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಲಾಗುವುದು. ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಸೂಚಿಸಲಾಗಿದೆ. ನಗರದ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಬುಧವಾರ ಸಂಜೆ ಪೂಜೆ ನಡೆಸಲಾಯಿತು.