Home News OPS: NPS ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡದಿದ್ದರೆ ‘ಕರ್ನಾಟಕ ಬಂದ್’: ರಾಜ್ಯಾಧ್ಯಕ್ಷ ಷಡಾಕ್ಷರಿ...

OPS: NPS ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡದಿದ್ದರೆ ‘ಕರ್ನಾಟಕ ಬಂದ್’: ರಾಜ್ಯಾಧ್ಯಕ್ಷ ಷಡಾಕ್ಷರಿ ಘೋಷಣೆ

Hindu neighbor gifts plot of land

Hindu neighbour gifts land to Muslim journalist

OPS: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ(NPS)ಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ(OPS) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ ಎರಡನೇ ರಾಜ್ಯ ಕಾರ್ಯಕಾರನಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಒಪಿಎಸ್ ಜಾರಿಗಾಗಿ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಆದರೆ, ಪ್ರಯೋಜನವಾಗಿಲ್ಲ. ಹೀಗಾಗಿ ಕರ್ನಾಟಕ ಬಂದ್ ಮಾಡಿಯಾದರೂ ಒಪಿಎಸ್ ಪಡೆದೇ ತೀರುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಹೋರಾಟ ಹೇಗಿರಬೇಕು ಎಂದರೆ ಇಡೀ ಕರ್ನಾಟಕ ಬಂದ್ ಆಗಿ ಸರ್ಕಾರಿ ನೌಕರರು ಯಾರೂ ಕೆಲಸಕ್ಕೆ ಬರುತ್ತಿಲ್ಲ ಎಂದು ಗುಪ್ತಚರ ಇಲಾಖೆಯವರು ಸಿಎಂಗೆ ವರದಿ ನೀಡಬೇಕು. ಬಂದ್ ವೇಳೆ ಯಾರಾದರೂ ಕೆಲಸ ಮಾಡುತ್ತಿದ್ದರೆ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಕಚೇರಿಯ ಒಳಗೆ ಹೋಗಿ ಮುಲಾಜಿಲ್ಲದೆ ಅವರನ್ನು ಎಳೆದು ಹೊರಗೆ ಕರೆತರಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಪಿಎಸ್ ಜಾರಿ ಮಾಡಿದರೆ ವಾರ್ಷಿಕ ಕನಿಷ್ಠ 5000 ಕೋಟಿ ರೂ. ಉಳಿತಾಯವಾಗಲಿದೆ ಎಂಬ ಅಂಶವನ್ನು ಎನ್.ಪಿ.ಎಸ್. ಸಮಿತಿ ಅಧ್ಯಕ್ಷರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.