ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
Sponsoredಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ. ಇದರ ಜೊತೆಗೆ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




