ದಕ್ಷಿಣ ಕನ್ನಡ ಜಿಲ್ಲೆಯ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ಆರ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಎಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
Sponsored‘ಬೃಹತ್ ಸೃಜನ’ ಅಭಿಯಾನದಡಿ ಈ ನೇಮಕಾತಿಯನ್ನು ಮಾಡಲಾಗಿದೆ. ಅಭಿಯಾನದಡಿ ಪ್ರತಿ ಜಿಲ್ಲೆಗೂ ಎಎಸಿಸಿ ಕೆಲವು ವೀಕ್ಷಕರನ್ನು ನೇಮಿಸಿತ್ತು ಈ ವೀಕ್ಷಕರು ಜಿಲ್ಲೆಯಾದ್ಯಂತ ಅಭಿಪ್ರಾಯಗಳನ್ನು ಸಂಗ್ರಹಿಸಿ, ಕಾರ್ಯಕರ್ತರನ್ನು ಸಂಪರ್ಕಿಸಿ, ಸಂಬಂಧಿತರೊಂದಿಗೆ ಸಮಾಲೋಚಿಸಿ ವರದಿಗಳನ್ನು ಸಂಗ್ರಹಿಸಿದ್ದಾರೆ.
ಪದ್ಮರಾಜ ಪೂಜಾರಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡವರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಪಡೆದು ಹಾಲಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಪರಾಭಾವಗೊಂಡಿದ್ದರು.




