ಸೋಮವಾರ, 26 ಅಕ್ಟೋಬರ್ 2026
Trending

ಪದ್ಮುಂಜ: ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕರಣಕ್ಕೆ ಅನುದಾನ: ಪೂರ್ವತಯಾರಿ ಕಾಮಗಾರಿ ವೀಕ್ಷಣೆ ಮಾಡಿದ ಹರೀಶ್‌ ಪೂಂಜಾ

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕರಣಕ್ಕೆ ಅನುದಾನ ಒದಗಿಸಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು.

Sponsored

Advertisement
Advertisement

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯoತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾoಟ , ಬ್ರಹ್ಮಕಲಸಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು,ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ,ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ ಇನ್ನು ಹಲವರು ಉಪಸ್ಥಿತರಿದ್ದರು.

Advertisement