Home Interesting ಸಮಯಕ್ಕೆ ಸರಿಯಾಗಿ ಅಡುಗೆ ಮಾಡಿಲ್ಲ ಎಂದು 12 ವರ್ಷದ ಮಗಳನ್ನು ಹೊಡೆದು ಕೊಂದ ಪೋಷಕರು !

ಸಮಯಕ್ಕೆ ಸರಿಯಾಗಿ ಅಡುಗೆ ಮಾಡಿಲ್ಲ ಎಂದು 12 ವರ್ಷದ ಮಗಳನ್ನು ಹೊಡೆದು ಕೊಂದ ಪೋಷಕರು !

Hindu neighbor gifts plot of land

Hindu neighbour gifts land to Muslim journalist

ರಾಯಪುರ: ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಗೆ ಸಂಬಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ ದಿಲ್ಸಾ ಎಕ್ಕಾ ಇಬ್ಬರನ್ನು ಬಂಧಿಸಲಾಗಿದೆ.

ಕೃತ್ಯ ನಡೆದಿದ್ದು ಹೇಗೆ?
2022ರ ಜೂನ್ 28ರಂದು 12 ವರ್ಷದ ತಮ್ಮ ಮಗಳು ಅದ್ಯಾಕೋ ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲ ಹಾಗೂ ದನಕರುಗಳಿಗೆ ಮೇವು ಹಾಕಿರಲಿಲ್ಲ. ಅಷ್ಟಕ್ಕೇ ಕೋಪಗೊಂಡ ಬಾಲಕಿ ತಂದೆ ದೊಣ್ಣೆಯಿಂದ ಥಳಿಸಿದ್ದಾನೆ. ನೆಲದ ಮೇಲೆ ಬಿದ್ದು ಒದ್ದಾಡುತ್ತಲೇ ಹುಡುಗಿ ಪ್ರಾಣ ಬಿಟ್ಟಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ತಾಯಿ ಕೂಡ ಇದ್ದಳು.

ಆ ಬಳಿಕ ಇಬ್ಬರೂ ಸೇರಿ ಮಗಳ ಮೃತದೇಹವನ್ನು ಇಲ್ಲಿನ ಸುರ್ಗುಜಾ ಜಿಲ್ಲೆಯ ಕಾಡಿನಲ್ಲಿ ಎಸೆದಿದ್ದಾರೆ. ನಂತರ ಯಾರಿಗೂ ಅನುಮಾನ ಬಾರದಂತೆ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದಾರೆ.

ಇದೇ ತಿಂಗಳ ಆಗಸ್ಟ್ 26ರಂದು ಹುಡುಗಿಯ ತಂದೆಯೇ ಸ್ವತಃ ಪೋಲಿಸ್ ತಾಣೆಗೆ ತೆರಳಿ ತಮ್ಮ ಮಗಳ ದೇಹವು ಕೊಳೆತ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮಗಳ ಬಟ್ಟೆ ಹಾಗೂ ಚಪ್ಪಲಿಯನ್ನೂ ಗುರುತಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಗೆ ಒಳಪಡಿಸಿದಾಗ ಪೋಷಕರೇ ಕೊಲೆ ಮಾಡಿರುವುದು ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆ ಜೂನ್‌ನಲ್ಲಿ ನಡೆದಿತ್ತು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನಿನ್ನೆ ಸಂಜೆ ಆರೋಪಿ ಪೋಷಕರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷö್ಯಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.