ಭಾನುವಾರ, 25 ಅಕ್ಟೋಬರ್ 2026

UP: ಆನ್ಲೈನ್ ಗೇಮ್ ಆಡಬೇಡಿ ಎಂದ ಪೋಷಕರು- ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ 3 ಸಹೋದರಿಯರು

UP: ಆನ್ಲೈನ್ ಗೇಮ್ ಆಡಬೇಡಿ ಎಂದು ಪೋಷಕರು ಹೇಳಿದ ಕಾರಣಕ್ಕೆ ವಸತಿ ಕಟ್ಟಡದ ಒಂಬತ್ತನೇ ಮಹಡಿಯಿಂದ ಹಾರಿ ಮೂವರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. 

Sponsored

ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್​​ನಲ್ಲಿ ನಡೆದಿದೆ. ಅಪ್ರಾಪ್ತ ಸಹೋದರಿಯರು ಮಂಗಳವಾರ ತಡರಾತ್ರಿ ತಾರಸಿಯಿಂದ ಕೆಳಗೆ ಹಾರಿದ್ದಾರೆ.

Marriage AdMarriage AdSponsored

ಮೃತರನ್ನು ವಿಶಿಕಾ (16), ಪ್ರಾಚಿ (14) ಮತ್ತು ಪಖಿ (12) ಎಂದು ಗುರುತಿಸಲಾಗಿದೆ. ಈ ಮೂವರು ಸಹೋದರಿಯರು ಆನ್‌ಲೈನ್ ‘ಕೊರಿಯನ್’ ಟಾಸ್ಕ್ ಆಧಾರಿತ ಆಟಕ್ಕೆ ತೀವ್ರವಾಗಿ ವ್ಯಸನಿಯಾಗಿದ್ದರು ಎಂದು ತಿಳಿದುಬಂದಿದ್ದು, ಇದೇ ಅವರ ಸಾವಿನ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಯಲು  ಆತ್ಮಹತ್ಯೆ ಪತ್ರ ಅಥವಾ ಡಿಜಿಟಲ್ ಪುರಾವೆಗಳು ಲಭ್ಯವಿದೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ.

ಕೋವಿಡ್ ವೇಳೆ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿದ್ದರು ಮತ್ತು ಆನ್‌ಲೈನ್ ಟಾಸ್ಕ್ ಆಧಾರಿತ ‘ಕೊರಿಯನ್ ಲವ್ ಗೇಮ್’ ಆಡುತ್ತಿದ್ದರು ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಹುಡುಗಿಯರು ನಿಯಮಿತವಾಗಿ ಶಾಲೆಗೆ ಹೋಗುತ್ತಿರಲಿಲ್ಲ. ಪೊಲೀಸರ ತಂಡ ಸ್ಥಳಕ್ಕೆ ತಲುಪಿದ್ದು,ತನಿಖೆ ನಡೆಸುತ್ತಿದ್ದಾರೆ.