ಭಾನುವಾರ, 25 ಅಕ್ಟೋಬರ್ 2026
Trending

ಫಿಲೋಮಿನಾ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳು ಫುಟ್ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಸೆ. 8ರಂದು ವಿವೇಕಾನಂದ ಪ. ಪೂ. ಕಾಲೇಜಿನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನ ಪಡೆದು ಸೆ. 26ರಂದು ಉಳ್ಳಾಲ ಮದನಿ ಪ.ಪೂ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Sponsored

ಫುಟ್ ಬಾಲ್ ತಂಡದ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಈ ಸಂದರ್ಭ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.