Home News Court: ಮನರಂಜನೆಗೆ ಇಸ್ಪೀಟ್ ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್

Court: ಮನರಂಜನೆಗೆ ಇಸ್ಪೀಟ್ ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್

Hindu neighbor gifts plot of land

Hindu neighbour gifts land to Muslim journalist

Court: ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್ (Court) ಸ್ಪಷ್ಟಪಡಿಸಿದೆ.

ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ.ಎನ್ನುವವರ ಆಯ್ಕೆಯನ್ನು ಕೋರ್ಟ್ ಮರುಸ್ಥಾಪಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ.

ರಸ್ತೆಯ ಬದಿಯಲ್ಲಿ ಕೆಲವರ ಜೊತೆಯಾಗಿ ಇಸ್ಪೀಟು ಆಡುತ್ತಿದ್ದ ಹನುಮಂತರಾಯಪ್ಪ ಅವರಿಗೆ ಯಾವುದೇ ವಿಚಾರಣೆ ನಡೆಸದೆ ₹200 ದಂಡ ವಿಧಿಸಲಾಗಿತ್ತು. ಹನುಮಂತರಾಯಪ್ಪ ಅವರು
ಜೂಜಾಡುವ ಅಭ್ಯಾಸ ಬೆಳೆಸಿಕೊಂಡ ವ್ಯಕ್ತಿ ಅಲ್ಲ ಎಂದು ಪೀಠವು ಹೇಳಿದೆ. ‘ಇಸ್ಪೀಟು ಆಟದಲ್ಲಿ ಹಲವು ಬಗೆಗಳಿವೆ. ಆದರೆ, ಅಂತಹ ಪ್ರತಿಯೊಂದು ಬಗೆಯೂ, ಅದರಲ್ಲೂ ಮುಖ್ಯವಾಗಿ ಮನರಂಜನೆಗಾಗಿ ಹಾಗೂ ವಿನೋದಕ್ಕಾಗಿ ಆಡುವುದು, ನೈತಿಕವಾದ ಅಧಃಪತನಕ್ಕೆ ಒಯ್ಯುವಂಥದ್ದು ಎಂಬುದನ್ನು ಒಪ್ಪಿಕೊಳ್ಳುವುದು ಕಷ್ಟ. ವಾಸ್ತವದಲ್ಲಿ, ನಮ್ಮ ದೇಶದ ಹಲವು ಕಡೆಗಳಲ್ಲಿ ಜೂಜು ಅಥವಾ ಬೆಟ್ಟಿಂಗ್‌ನ ಲವಲೇಶವೂ ಇಲ್ಲದೆ ಇಸ್ಪೀಟು ಆಡುವುದು ಬಡವರ ಮನರಂಜನಾ ಮಾರ್ಗ ಎಂದು ಒಪ್ಪಿತವಾಗಿದೆ’ ಎಂದು ಹೇಳಿದೆ.