ಭಾನುವಾರ, 25 ಅಕ್ಟೋಬರ್ 2026
Trending

ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ, ಹೆಚ್‌ಡಿಕೆ ಶುಭಾಶಯ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ.

Sponsored

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನ ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.