Home News Mandya: ಬೈಕ್‌ ಅಡ್ಡಗಟ್ಟಿದ ಪೊಲೀಸರು: ತಾಯಿ ಮಡಿಲಲ್ಲೇ ಪ್ರಾಣ ಬಿಟ್ಟ ಮಗು: ಆರು ಎಎಸ್‌ಐಗಳು ಸಸ್ಪೆಂಡ್‌

Mandya: ಬೈಕ್‌ ಅಡ್ಡಗಟ್ಟಿದ ಪೊಲೀಸರು: ತಾಯಿ ಮಡಿಲಲ್ಲೇ ಪ್ರಾಣ ಬಿಟ್ಟ ಮಗು: ಆರು ಎಎಸ್‌ಐಗಳು ಸಸ್ಪೆಂಡ್‌

Hindu neighbor gifts plot of land

Hindu neighbour gifts land to Muslim journalist

Mandya: ಹೆಲ್ಮೆಟ್ ತಪಾಸಣೆಗಾಗಿ ಪೊಲೀಸ್ ಬಳಿ ಬೈಕ್ ನಿಲ್ಲಿಸಲು ಹೋದಾಗ ಬೈಕ್ ನಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸರ ಈ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ಕಾರಣವಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ 6 ಮಂದಿ ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ ಮೇಲ ಹರಿದಿದ್ದು, ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ.

ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದು, ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಬಗ್ಗೆ ಇತ್ತ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಮಗುವಿನ ಸಾವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಮಗುವಿನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.