Home latest Passenger safety : ವಾಹನ ಸವಾರರೆ ಗಮನಿಸಿ : ಕರ್ನಾಟಕದಲ್ಲಿ ಇಂದಿನಿಂದ ವಾಹನ ಚಾಲನೆ ವೇಳೆ...

Passenger safety : ವಾಹನ ಸವಾರರೆ ಗಮನಿಸಿ : ಕರ್ನಾಟಕದಲ್ಲಿ ಇಂದಿನಿಂದ ವಾಹನ ಚಾಲನೆ ವೇಳೆ ಈ ನಿಯಮ ಕಡ್ಡಾಯ | ಉಲ್ಲಂಘಿಸಿದರೆ ಭಾರೀ ದಂಡ!

Hindu neighbor gifts plot of land

Hindu neighbour gifts land to Muslim journalist

ಇತ್ತೀಚಿನ ದಿನಗಳಲ್ಲಿ ದಿನಂಪ್ರತಿ ಅತಿವೇಗದ ಚಾಲನೆ, ಸಂಚಾರಿ ನಿಯಮದ ಉಲ್ಲಂಘನೆಯಿಂದ ಅಪಘಾತ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ.

ಈ ನಡುವೆ ಜನರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಸರ್ಕಾರ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದೆ. ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸದ ಕಾರಣ, ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುವ ಪ್ರಕರಣ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಲು ಆದೇಶಿಸಿದೆ.

ಈಗಾಗಲೇ ಮುಂಬೈನಲ್ಲಿ ಈ ನಿಯಮ ನವೆಂಬರ್ 1ರಿಂದ ಜಾರಿಗೊಳ್ಳಲಿದ್ದು, ಇದೇ ವೇಳೆ ಕರ್ನಾಟಕದಲ್ಲಿಯೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕಾರು ತಯಾರಕರಿಗೆ ಹಿಂಭಾಗದ ಸೀಟ್ ಬೆಲ್ಟ್ಗಳಿಗೆ ಅಲಾರಂ ವ್ಯವಸ್ಥೆಯನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಲು ಕರಡು ನಿಯಮಗಳನ್ನು ಹೊರಡಿಸಿದ್ದಾರೆ.

ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಇತ್ತೀಚೆಗೆ ಕಾರು ಅಪಘಾತದಲ್ಲಿ ನಿಧನರಾದ ಬಳಿಕ ಅವರು ಹಿಂದಿನ ಸೀಟಿನಲ್ಲಿ ಕುಳಿತಿದ್ದು, ಅವರ ಸೀಟ್ ಬೆಲ್ಟ್ ಹಾಕಿರಲಿಲ್ಲ ಎಂದು ಮಾಧ್ಯಮ ವರದಿಗಳು ತಿಳಿಸಿದ್ದವು ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಹಿಂಭಾಗದ ಸೀಟ್ಬೆಲ್ಟ್ಗಳ ಬಳಕೆಯನ್ನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.

ಕರ್ನಾಟಕದಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಮೀರಿದರೆ 1 ಸಾವಿರ ದಂಡವನ್ನು ವಿಧಿಸಲಾಗುತ್ತದೆ ಎಂಬುದಾಗಿ ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.

ಈ ವೇಳೆ ನವೆಂಬರ್ 1, 2022ರಿಂದ ಮುಂಬೈನಲ್ಲಿಯು ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.