Home News Ashwathnarayana: ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಗರಣ; ಬಿಜೆಪಿ ಶಾಸಕ ಅಶ್ವತ್ಥನಾರಾಯಣ ವಿಚಾರಣೆ

Ashwathnarayana: ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಗರಣ; ಬಿಜೆಪಿ ಶಾಸಕ ಅಶ್ವತ್ಥನಾರಾಯಣ ವಿಚಾರಣೆ

Hindu neighbor gifts plot of land

Hindu neighbour gifts land to Muslim journalist

Ashwathnayarana: ಸಿಐಡಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಿಜೆಪಿ ಶಾಸಕ ಡಾ.ಅಶ್ವತ್ಥನಾರಾಯಣ ಅವರನ್ನು 2022 ರಲ್ಲಿ ನಡೆದಿದ್ದ 545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಗರಣಕ್ಕೆ ಕುರಿತಂತೆ ವಿಚಾರಣೆ ನಡೆಸಿದ್ದಾರೆ. ಆದರೆ ಅವರು ತಮ್ಮ ವಿರುದ್ಧದ ಆರೋಪವನ್ನು ಇದೊಂದು ರಾಜಕೀಯ ಪ್ರೇರಿತವೆಂದು ತಳ್ಳಿಹಾಕಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ.

ಕಾಂಗ್ರೆಸ್‌ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅಶ್ವತ್ಥ್‌ ನಾರಾಯಣ ಅವರ ಪಾತ್ರವಿದೆ ಎಂದು ಗಂಭೀರ ಆರೋಪವನ್ನು ಮಾಡಿತ್ತು. ಅಲ್ಲದೆ ಕಾಂಗ್ರೆಸ್‌ ಸರಕಾರವು ಹಗರಣದ ಮರು ತನಿಖೆಗೆ ಆದೇಶಿಸಿತ್ತು. ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಅಶ್ವತ್ಥನಾರಾಯಣ ಅವರಿಗೆ ನೋಟಿಸ್‌ ಜಾರಿ ಮಾಡಿದ್ದರು.

2021, ಅ.3 ರಂದು ಬೆಂಗಳೂರು ಸೇರಿದ ರಾಜ್ಯದ ಏಳು ಜಿಲ್ಲೆಗಳ 93 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್‌ ಇಲಾಖೆ 545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲ ಅಭ್ಯರ್ಥಿಗಳು ಅಕ್ರಮವಾಗಿ ಹುದ್ದೆಗಳಿಸಲು ಲಂಚ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಯ ಎಸ್‌ಐಟಿಗೆ ವಹಿಸಿತ್ತು. ಈ ಕುರಿತು ಎಸ್‌ಐಟಿ ಎಡಿಜಿಪಿ ಅಮೃತ್‌ಪಾಲ್‌ ಸೇರಿದಂತೆ 110 ಮಂದಿಯನ್ನು ಬಂಧಿಸಿದೆ.