Home News Anjanadri : ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದ- ಖುದ್ದು ವಿಚಾರಣೆಗೆ ಹಾಜರಾಗುವಂತೆ ಕೊಪ್ಪಳ ಡಿಸಿಗೆ ಸುಪ್ರೀಂ...

Anjanadri : ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದ- ಖುದ್ದು ವಿಚಾರಣೆಗೆ ಹಾಜರಾಗುವಂತೆ ಕೊಪ್ಪಳ ಡಿಸಿಗೆ ಸುಪ್ರೀಂ ತಾಕೀತು !!

Hindu neighbor gifts plot of land

Hindu neighbour gifts land to Muslim journalist

Anjanadri: ಅಂಜನಾದ್ರಿ ಬೆಟ್ಟದಲ್ಲಿ (Anjanadri Hill)ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್ಲೈನ್ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ.

ಹೌದು, ಹನುಮನ ಜನ್ಮಸ್ಥಳವೆಂದೇ ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಆಗಸ್ಟ್ 11 ರಂದು ಆನ್‌ಲೈನ್ ಮೂಲಕ ಖುದ್ದು ಹಾಜರಾಗುವಂತೆ ಸರ್ವೋಚ್ಚ ನ್ಯಾಯಾಲಯ ತಾಕೀತು ಮಾಡಿದೆ.

ಏನಿದು ಪ್ರಕರಣ?

ಅಂಜನಾದ್ರಿ ಬೆಟ್ಟದ ಮೇಲಿರುವ ಆಂಜನೇಯ ದೇವಸ್ಥಾನದಲ್ಲಿ ಅರ್ಚಕ ವಿದ್ಯಾದಾಸ್ ಬಾಬಾರಿಗೆ ಪೂಜೆಗೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಅಲ್ಲದೇ ಬೆಟ್ಟದ ಮೇಲೆ ಅವರಿಗೆ ಮೂಲಸೌಭ್ಯವಿರುವ ಕೊಠಡಿ ನೀಡಬೇಕು ಎಂದು ತಿಳಿಸಿತ್ತು. ಆದರೆ ಇತ್ತೀಚೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ ಬೇರೊಬ್ಬ ಅರ್ಚಕರು ಪೂಜೆ ಸಲ್ಲಿಸಿದ್ದರು. ಇದಕ್ಕೆ ವಿದ್ಯಾದಾಸ್ ವಿರೋಧ ವ್ಯಕ್ತಪಡಿಸಿದ್ದರು. ಇದಾದ ಬಳಿಕ ದೇವಸ್ಥಾನದ ಹುಂಡಿ ವಿಚಾರವಾಗಿಯೂ ವಿದ್ಯಾದಾಸ್ ಬಾಬಾ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ರಾವ್ ಮಧ್ಯೆ ಜಟಾಪಟಿ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾದಾಸ್ ಬಾಬಾ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ದೇವಾಲಯದ ಅರ್ಚಕರ ಪರವಾಗಿ ವಕೀಲ ವಿಷ್ಣು ಶಂಕರ್ ಜೈನ್ ವಾದಿಸಿದ್ದರು. ವಾದ ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ಆಗಸ್ಟ 11ರಂದು ಡಿಸಿ ಸುರೇಶ ಇಟ್ನಾಳ್ಗೆ ಆನ್ಲೈನ್ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Dharmasthala: ಧರ್ಮಸ್ಥಳ: ಶವ ಹೂತಿಟ್ಟ ಪ್ರಕರಣ: ದೂರುದಾರನ ಪರವಾಗಿ ಸಾಕ್ಷಿ ಹೇಳಲು ಬಂದ 6 ಜನ ಸ್ಥಳೀಯರು!