ಸೋಮವಾರ, 26 ಅಕ್ಟೋಬರ್ 2026
Trending

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

ಉಜಿರೆ, ಅ. 08: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಆಟೋಮೊಬೈಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಪೂಲ್ ಕ್ಯಾಂಪಸ್ ಡ್ರೈವ್ ಆಯೋಜಿಸಲಾಯಿತು.

Sponsored

ಕಾಲೇಜಿನ ಆವರಣದಲ್ಲಿ ನಡೆದ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಉಜಿರೆ ಹಾಗೂ ಸುತ್ತಮುತ್ತಲಿನ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್, ಆಟೋಮೊಬೈಲ್ ಎಂಜಿನಿಯರಿಂಗ್ ಹಾಗೂ ಮೆಕಾಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗಗಳಿಗೆ ಸೇರಿದ ಒಟ್ಟು 250 ಡಿಪ್ಲೊಮಾ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

Advertisement
Advertisement

ಪ್ರತಿಷ್ಠಿತ ಆಟೋಮೊಬೈಲ್ ಸಂಸ್ಥೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸಿದ ಈ ಕ್ಯಾಂಪಸ್ ಡ್ರೈವ್‌ನಲ್ಲಿ ಅಭ್ಯರ್ಥಿಗಳ ಸಾಮರ್ಥ್ಯವನ್ನು ವಿವಿಧ ಹಂತಗಳಲ್ಲಿ ಮೌಲ್ಯಮಾಪನ ಮಾಡಲಾಯಿತು. ಆರಂಭಿಕ ಹಂತದಲ್ಲಿ ಆನ್‌ಲೈನ್ ತಾಂತ್ರಿಕ ಸಂದರ್ಶನ ನಡೆಸಲಾಗಿದ್ದು, ನಂತರ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಿಂದ ನೇರ ಸಂದರ್ಶನ ನಡೆಯಿತು. ಅಭ್ಯರ್ಥಿಗಳ ತಾಂತ್ರಿಕ ಜ್ಞಾನ, ಸಂವಹನ ಕೌಶಲ್ಯ, ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಹಾಗೂ ಉದ್ಯೋಗದ ವಾತಾವರಣಕ್ಕೆ ಹೊಂದಿಕೊಳ್ಳುವ ಗುಣಗಳನ್ನು ಪರಿಗಣಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಎಸ್‌ಡಿಎಂ ಪಾಲಿಟೆಕ್ನಿಕ್‌ನ ಪ್ಲೇಸ್‌ಮೆಂಟ್ ಅಧಿಕಾರಿ ಅಮರೇಶ್ ಹೆಬ್ಬಾರ್ ಅವರು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್‌ನ ಪ್ರತಿನಿಧಿಗಳು ಹಾಗೂ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಕಾಲೇಜಿನ ಪ್ರಾಂಶುಪಾಲ ಸಂತೋಷ್ ಮಾತನಾಡಿ, ಕ್ಯಾಂಪಸ್ ಡ್ರೈವ್‌ನಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ನೇಮಕಾತಿ ಪ್ರಕ್ರಿಯೆಯನ್ನು ಎದುರಿಸಬೇಕು. ದೊರೆತಿರುವ ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ತಮ್ಮ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಂಡು ಆಟೋಮೊಬೈಲ್ ಉದ್ಯಮದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂದು ಪ್ರೋತ್ಸಾಹಿಸಿದರು.

Advertisement