ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ರಾಷ್ಟ್ರೀಯ ತನಿಕಾ ದಳ ಸಂಸ್ಥೆಯು ಇಬ್ಬರು ಆರೋಪಿಗಳನ್ನು ಬಂಧಿಸಿದೆ. .
Sponsoredಹತ್ಯೆಯ ಬಳಿಕ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿಯಾಗಿದ್ದ ನೌಷಾದ್ ಪಡಂಗಡಿಯ ತಲೆ ಮರೆಸಿಕೊಂಡಿದ್ದ. ಅವನ ಪತ್ತೆಗೆ ಕಳೆದ ನಾಲ್ಕು ವರ್ಷಗಳಿಂದ ಶೋಧ ನಡೆಸಲಾಗುತ್ತಿತ್ತು. ಅಧಿಕಾರಿಗಳು ಇಂದು ನೌಷಾದ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದರ ಬೆನ್ನಲ್ಲೇ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆ ನಿವಾಸಿ ಅಬ್ದುಲ್ ನಾಸಿರ್‌ನನ್ನು (41) ಕೇರಳದ ಕೊಚ್ಚಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ಕೃತ್ಯ ಎಸಗಿದ್ದ ಮುಖ್ಯ ಶೂಟರ್‌ಗಳು ಹಾಗೂ ಪ್ರಮುಖ ಆರೋಪಿಗಳಿಗೆ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಇವರು ಸಹಾಯ ಮಾಡಿದ್ದರು. ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್‌ನಲ್ಲಿ ಸುರಕ್ಷಿತವಾಗಿ ಅಡಗಿಕೊಳ್ಳಲು ರಹಸ್ಯ ಅಡಗುತಾಣಗಳನ್ನು ವ್ಯವಸ್ಥೆ ಮಾಡಿಕೊಟ್ಟ ಗಂಭೀರ ಆರೋಪ ಇವರ ಮೇಲಿದೆ. ಈ ಪ್ರಕರಣದಲ್ಲಿ ಒಟ್ಟು 27 ಜನ ಆರೋಪಿಗಳ ಪಟ್ಟಿಯಲ್ಲಿ ಇವರ ಹೆಸರನ್ನೂ ಸೇರಿಸಲಾಗಿತ್ತು.




