ಶನಿವಾರ, 24 ಅಕ್ಟೋಬರ್ 2026

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ನೌಷಾದ್ ಪಡಂಗಡಿ ಬಂಧನ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಪ್ಪತ್ತಕ್ಕೂ ಅಧಿಕ ಮಂದಿಯನ್ನು ಎನ್.ಐ.ಎ.ಅಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದಾರೆ. ಇದೀಗ ಮತ್ತೊಬ್ಬ ಆರೋಪಿ ನೌಷಾದ್ ಪಡಂಗಡಿಯನ್ನು ಪೋಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಹತ್ಯೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ನೌಷಾದ್ ಪಡಂಗಡಿಯ ಪತ್ತೆಗೆ ಕಳೆದ ನಾಲ್ಕು ವರ್ಷಗಳಿಂದ ಶೋಧ ನಡೆಸಲಾಗುತ್ತಿತ್ತು. ಆತನ ಮನೆಗೆ ಹಲವು ಭಾರಿ ದಾಳಿ ನಡೆದಿತ್ತು. ಇದೀಗ ಆತನನ್ನು ಬಲೆಗೆ ಕೆಡವಲಾಗಿದೆ ಎಂದು ತಿಳಿದು ಬಂದಿದೆ 

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌.ಐ.ಎ. ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ.