

ಬೆಂಗಳೂರು : ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಟ್ವಟ್ಟರ್‌ನಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ರವಾನಿಸಿದ್ದಾರೆ.
ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ಬಿಡುಗಡೆ ಮಾಡಿದ್ದು 2022ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ದಿನಾಂಕ 21-05-2022 ಮತ್ತು 22-05 2022ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ದಿನಾಂಕ 17-08-2022ರ ಇಂದು ಇಲಾಖಾ ವೆಬ್ ಸೈಟ್ www.schooleducation.kar.nic.in o ಎಂದು ತಿಳಿಸಿದೆ.
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು ಮತ್ತು ಮೀಸಲಾತಿ ವಿರಗಳನ್ನು ಹೊರತುಪಡಿಸಿ, ಆನ್ ಲೈನ್ ಅರ್ಜಿಯಲ್ಲಿ ವೈಯಕ್ತಿಕ ವಿವರಗಳಾದ ಅಭ್ಯರ್ಥಿಯ ಹೆಸರು, ತಂದೆ ಹೆಸರು, ತಾಯಿ ಹೆಸರು, ಜನ್ಮ ದಿನಾಂಕ, ಪದವಿ, ಬಿಇಡಿ, ಡಿಎಲ್ ಇಡಿ ಮತ್ತು ಸಿಟಿಇಟಿ ಮತ್ತು ಟಿಇಟಿ ಅಂಕಗಳಿಗೆ ಸಂಬಂಧಿಸಿದಂತೆ ಮಾತ್ರ ತಿದ್ದುಪಡಿಗೆ ದಿನಾಂಕ 18-08-2022 ರಿಂದ 24-08-2022ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ದಿನಾಂಕದ ನಂತ್ರ ಯಾವುದೇ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದೆ.














