Home News CM Siddaramaiah: RSS ನಿಂದಲೇ ಅಪರಾಧ ಪ್ರಕರಣ ಹೆಚ್ಚಳ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ...

CM Siddaramaiah: RSS ನಿಂದಲೇ ಅಪರಾಧ ಪ್ರಕರಣ ಹೆಚ್ಚಳ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ಖಾಸಗಿ ದೂರು!

MUDA Scam case

Hindu neighbor gifts plot of land

Hindu neighbour gifts land to Muslim journalist

CM Siddaramaiah: ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಸಿಡಿದೆದಿದ್ದು, ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದೆ.

ಕಿರಣ್‌ ಎಸ್‌ ಎಂಬುವವರು ಖಾಸಗಿ ದೂರನ್ನು ನೀಡಿದ್ದಾರೆ. ಬಿಎನ್‌ಎಸ್‌ ಸೆಕ್ಷನ್‌ 299,352, 356(2) ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯನವರು, ಬಿಜೆಪಿಯವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿ ಎಂದು ರಾಜ್ಯಪಾಲರ ಮಾತು ಸರಿಯಿದೆ. ಕಳೆದ ಸರಕಾರದ ಅವಧಿಗಿಂತ ಕೊಲೆ, ಕೊಲೆ ಯತ್ನ, ದರೋಡೆ, ಕಳ್ಳತನ ಅತ್ಯಾಚಾರ ಎಲ್ಲಾ ಪ್ರಕರಣಗಳು ನಮ್ಮ ಸರಕಾರ ಬಂದ ಮೇಲೆ ಕಡಿಮೆಯಾಗಿದೆ ಎಂದು ಹೇಳಿದರು.

ನಮ್ಮ ಸರಕಾರಕ್ಕೆ ಅಧಿಕಾರಕ್ಕೆ ಬಂದ ಮೇಲೆ ಅಪರಾಧ ತಡೆಗೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಇನ್ನೂ ಇಳಿಕೆ ಮಾಡುವ ಉದ್ದೇಶವಿದೆ. ಅಪರಾಧಗಳನ್ನು ಮಾಡುವುದೇ ನೀವು. ನಿಮ್ಮ ಆರ್‌ಎಸ್‌ಎಸ್‌ನವರಿಂದಲೇ ಅಪರಾಧಗಳು ಹೆಚ್ಚುತ್ತಿದೆ ರಾಜ್ಯಪಾಲರ ಭಾಷಣದ ಕುರಿತು ಚರ್ಚೆಗೆ ಉತ್ತರಿಸುತ್ತಾ ಹೇಳಿದರು.

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಲು ಕಾರಣ ಆರ್‌ಎಸ್‌ಎಸ್‌. ದ್ವೇಷ ರಾಜಕಾರಣ, ಹಿಂಸಾಚಾರ ಕಾರಣ, ಗಲಭೆಗೆ ಹಾಗೂ ಅಪರಾಧಗಳಿಗೆ ಆರ್‌ಎಸ್‌ಎಸ್‌ನವರ ದ್ವೇಷ ರಾಜಕಾರಣ ಕಾರಣ ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಬಿಜೆಪಿಯವರು ಭಾರೀ ವಿರೋಧ ವ್ಯಕ್ತಪಡಿಸಿದರು.

ಆದರೆ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡುತ್ತಾ, ʼ ನಾನು ನನ್ನ ಮಾತಿಗೆ ಬದ್ಧ. ಆರ್‌ಎಸ್‌ಎಸ್‌ನವರಿಗೆ ಹೆದರುವ ಪ್ರಶ್ನೆಯೇ ಇಲ್ಲ. ಅವರನ್ನು ಎದುರಿಸಲು ಸಿದ್ಧ ʼ ಎಂದು ಸವಾಲು ಹಾಕಿದರು.