Home latest ಅತಿ ಶೀಘ್ರದಲ್ಲಿ 1120 ದೈಹಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ : ಸಚಿವ ಬಿ.ಸಿ ನಾಗೇಶ್

ಅತಿ ಶೀಘ್ರದಲ್ಲಿ 1120 ದೈಹಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ : ಸಚಿವ ಬಿ.ಸಿ ನಾಗೇಶ್

Hindu neighbor gifts plot of land

Hindu neighbour gifts land to Muslim journalist

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಅವರು ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸೊಂದನ್ನು ನೀಡಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದಾರೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂದು ವಿಧಾನಪರಿಷತ್‍ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹೇಳಿದ್ದಾರೆ.

ಉಳಿದಂತೆ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣದಡಿ ಹತ್ತು ಸಾವಿರಕ್ಕೂ ಹೆಚ್ಚು ಶಿಕ್ಷಕರು ಮತ್ತು ಚಿತ್ರಕಲೆಯಲ್ಲಿ 2800ಕ್ಕೂ ಹೆಚ್ಚು ಶಿಕ್ಷಕರೂ ಕೆಲಸ ನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 2015ರವರೆಗೆ ಖಾಲಿ ಉಳಿದಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಲಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು 455 ಹುದ್ದೆಗಳಿಗೆ ಪ್ರಸ್ತಾವನೆಯನ್ನೇ ಕಳುಹಿಸಲಿಲ್ಲ. 171 ಹುದ್ದೆಗಳ ಪ್ರಸ್ತಾವನೆಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ನೆನೆಗುದಿಗೆ ಬಿದ್ದಿವೆ ಎಂದು ಹೇಳಿದರು.