Home latest PUC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!!

PUC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!!

Hindu neighbor gifts plot of land

Hindu neighbour gifts land to Muslim journalist

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಮಾನಸಿಕ ಒತ್ತಡ ಜೊತೆಗೆ ವೈಯಕ್ತಿಕ ಕಾರಣಗಳಿಂದ ಯುವಜನತೆ ಸಾವಿನ ದವಡೆಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ.

ಮೊಗ್ಗಾಗಿ ಅರಳಬೇಕಿದ್ದ ಕುಸುಮವೊಂದು ಅರಳುವ ಮುನ್ನವೇ ಕಾಣದ ಲೋಕಕ್ಕೆ ತೆರಳಿದ ಘಟನೆಯೊಂದು ವರದಿಯಾಗಿದೆ. ಮೈಸೂರಿನ ಪಡುವಾರಹಳ್ಳಿಯ ಬಿಜಿಎಸ್ ಒಕ್ಕಲಿಗರ ವಿದ್ಯಾರ್ಥಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೆಚ್ ​​ಡಿ ಕೋಟೆ ಮೂಲದ ಪ್ರಥಮ ಪಿಯುಸಿ ವಿದ್ಯಾರ್ಥಿ ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ದೀಕ್ಷಿತ್‌ ಕುವೆಂಪು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಈತ ಪಡುವಾರಹಳ್ಳಿ ಒಕ್ಕಲಿಗರ ವಿದ್ಯಾರ್ಥಿನಿಲಯದ ಹಾಸ್ಟೆಲ್ ನಲ್ಲಿ ವ್ಯಾಸಂಗದ ಸಲುವಾಗಿ ನೆಲೆಸಿದ್ದ .

ರಾತ್ರಿ 11.30 ಆದರೂ ದೀಕ್ಷಿತ್ ರೂಮಿನ ಕೊಠಡಿಯ ಬಾಗಿಲು ತೆರೆಯದೆ ಇದ್ದುದ್ದರಿಂದ ಪಕ್ಕದ ಕೊಠಡಿಯ ವಿದ್ಯಾರ್ಥಿಗಳು ಹಾಸ್ಟೆಲ್ ಮೇಲ್ವಿಚಾರಕರಿಗೆ ತಿಳಿಸಿದ್ದಾರೆ.

ಸುಮಾರು ಹೊತ್ತು ಬಾಗಿಲು ಬಡಿದರೂ ಬಾಗಿಲು ತೆರೆಯದೇ ಇದ್ದಾಗ ಅನುಮಾನ ಗೊಂಡ ಮೇಲ್ವಿಚಾರಕರು ಪೊಲೀಸರಿಗೆ ಮಾಹಿತಿ ನೀಡಿದ್ದು,ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಸಂಜೆ ಹಾಸ್ಟೆಲ್ ಕೊಠಡಿಯೊಳಗೆ ದೀಕ್ಷಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಕೊಠಡಿ ಬಾಗಿಲು ಮುರಿದಾಗಲೆ ದೀಕ್ಷಿತ್‌ ಆತ್ಮಹತ್ಯೆ ಮಾಡಿಕೊಂಡ ವಿಚಾರ ಬಹಿರಂಗವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ಮಗನ ಆತ್ಮಹತ್ಯೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೋಷಕರು ಮಗನ ಸ್ಥಿತಿ ಕಂಡು ಕಂಬನಿ ಮಿಡಿದಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿತ್ತು.