ಸೋಮವಾರ, 26 ಅಕ್ಟೋಬರ್ 2026
Trending

ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ!!

ಭಾರತದ ಇತಿಹಾಸದಲ್ಲೇ ಅತ್ಯಂತ ಭೀಕರ ಉಗ್ರರ ದಾಳಿಗಳಲ್ಲಿ ಒಂದಾದ ಪುಲ್ವಾಮಾ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನಾಗಿದ್ದ ಹಮ್ಜಾ ಬುರ್ಹಾನ್ ಎಂಬಾತನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ.

Sponsored

ಹೌದು, ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್ ಆಗಿದ್ದಾನೆ. ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರನ್ನು ಬಲಿಪಡೆದಿದ್ದ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಹಮ್ಜಾ ಬುರ್ಹಾನ್ ನನ್ನು ಅಪರಿಚಿತ ಗನ್ ಮ್ಯಾನ್ ಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Advertisement
Advertisement

ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಪುಲ್ವಾಮಾ ಕನೆಕ್ಷನ್: 2019ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ಪಿಎಫ್ (CRPF) ಯೋಧರ ವಾಹನದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಸಂಚಿನಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಈ ದಾಳಿಯಲ್ಲಿ ಭಾರತದ 40 ವೀರ ಯೋಧರು ಹುತಾತ್ಮರಾಗಿದ್ದರು.

Advertisement