Home News Punjalakatte: ತೆಂಕುತಿಟ್ಟು ಯಕ್ಷಗಾನದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್‌ ಇನ್ನಿಲ್ಲ

Punjalakatte: ತೆಂಕುತಿಟ್ಟು ಯಕ್ಷಗಾನದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್‌ ಇನ್ನಿಲ್ಲ

Hindu neighbor gifts plot of land

Hindu neighbour gifts land to Muslim journalist

Punjalakatte: ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ, ಹನುಮಗಿರಿ ಮೇಳದ ಹಿರಿ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್‌ (60) ಅವರು ರವಿವಾರ (ಜು.20) ಮಧ್ಯಾಹ್ನ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೂರು ದಶಕಗಳಿಗೂ ಹೆಚ್ಚಿನ ಕಾಲ ತಿರುಗಾಟ ಮಾಡಿದ ಇವರು ಹನುಮಗಿರಿ ಮೇಳದಲ್ಲಿ ಬಣ್ಣದ ವೇಷಧಾರಿಯಾಗಿದ್ದರು. ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಕಳೆದ ಕೆಲವು ತಿಂಗಳ ಹಿಂದಷ್ಟೇ ಹನುಮಗಿರಿ ಮೇಳದಲ್ಲಿ ತಿರುಗಾಟ ಮುಗಿಸಿದ ಅವರು ನಿವೃತ್ತಿಯನ್ನೂ ಘೋಷಣೆ ಮಾಡಿದ್ದರು.