ಶನಿವಾರ, 24 ಅಕ್ಟೋಬರ್ 2026

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಆರೋಪಿ ಅರೆಸ್ಟ್

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ.

ಮಂಗಳೂರು: ವಿವಿಧೆಡೆ ಮೊಸರು ಕುಡಿಕೆ ಉತ್ಸವ, ಪರ್ಯಾಯ ರಸ್ತೆ-ಪೊಲೀಸರ ಸೂಚನೆ

 
ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡು ನಿವಾಸಿ ಸತೀಶ್ (31) ಎಂದು ಗುರುತಿಸಲಾಗಿದೆ. ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ್ ಬಿ. ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. 
ಆಗಸ್ಟ್ 24ರ ರಾತ್ರಿ ದೇವಸ್ಥಾನದ ಆವರಣಕ್ಕೆ ಪ್ರವೇಶಿಸಿದ್ದ ಆರೋಪಿ, ಮುಖ್ಯದ್ವಾರದ ಬಳಿ ಇಟ್ಟಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ. ಆಗಸ್ಟ್ 25ರಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದಾಗ ಡಬ್ಬಿ ಕಾಣೆಯಾಗಿರುವುದು ಗಮನಕ್ಕೆ ಬಂದಿತ್ತು. ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಡಬ್ಬಿಯನ್ನು ತೆಗೆದುಕೊಂಡು ಹೋಗಿರುವುದು ಪತ್ತೆಯಾಗಿತ್ತು. 

ಮಂಗಳೂರು: ವಿವಿಧೆಡೆ ಮೊಸರು ಕುಡಿಕೆ ಉತ್ಸವ, ಪರ್ಯಾಯ ರಸ್ತೆ-ಪೊಲೀಸರ ಸೂಚನೆ

ಕಾಣಿಕೆ ಡಬ್ಬಿಯ ಮೌಲ್ಯ ಸುಮಾರು ₹2,500 ಹಾಗೂ ಅದರಲ್ಲಿದ್ದ ಕಾಣಿಕೆ ಹಣ ಸುಮಾರು ₹4,500 ಎಂದು ಅಂದಾಜಿಸಲಾಗಿದ್ದು, ಒಟ್ಟು ಸುಮಾರು ₹7,000 ನಷ್ಟ ಉಂಟಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಬದಿಯಡ್ಕದಲ್ಲಿ ಸತೀಶ್‌ನನ್ನು ಬಂಧಿಸಿದ್ದಾರೆ. ಆತನಿಂದ ಕಳವು ಮಾಡಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ. 

ಮಂಗಳೂರು: ವಿವಿಧೆಡೆ ಮೊಸರು ಕುಡಿಕೆ ಉತ್ಸವ, ಪರ್ಯಾಯ ರಸ್ತೆ-ಪೊಲೀಸರ ಸೂಚನೆ

ಇದೇ ಆರೋಪಿಯ ವಿರುದ್ಧ ಕೇರಳದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣವೂ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.