Home News Puttur: ಕಟ್ಟಡ ಧ್ವಂಸ ಪ್ರಕರಣ; ಶಾಸಕ ಅಶೋಕ್‌ ಕುಮಾರ್‌ ರೈ, ಈಶ್ವರ್‌ ಭಟ್‌ ವಿರುದ್ಧ ದೂರು

Puttur: ಕಟ್ಟಡ ಧ್ವಂಸ ಪ್ರಕರಣ; ಶಾಸಕ ಅಶೋಕ್‌ ಕುಮಾರ್‌ ರೈ, ಈಶ್ವರ್‌ ಭಟ್‌ ವಿರುದ್ಧ ದೂರು

Hindu neighbor gifts plot of land

Hindu neighbour gifts land to Muslim journalist

Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸ ಮಾಡಲಾಗಿದೆ ಎಂದು

Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸ ಮಾಡಲಾಗಿದೆ ಎಂದು ಬಾಡಿಗೆದಾರರ ಪೈಕಿ ಒಬ್ಬರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರಭಟ್‌ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿರುವ ಕುರಿತು ವರದಿಯಾಗಿದೆ.

ಉಜಿರೆ ನಿವಾಸಿ ದಿ.ಜಯಶ್ರೀ ಹೊಳ್ಳ ಅವರ ಪುತ್ರ ವಿಜಯ ರಾಘವೇಂದ್ರ ಅವರು ದೂರನ್ನು ನೀಡಿದವರು. ಇವರ ಅಜ್ಜ ವಿಷ್ಣಯ್ಯ ಹೊಳ್ಳ ಎಂಬುವವರಿಗೆ ದೇಗುಲದಿಂದ ಬಾಡಿಗೆಗೆ ನೀಡಿದ ಸ್ಥಳದಲ್ಲಿ ವಿಷ್ಣಯ್ಯ ಹೊಳ್ಳರ ನಿಧನದ ನಂತರ ಇವರ ಪುತ್ರ ಗಣಪತಿ ವಿಷ್ಣು ಹೊಳ್ಳ, ಅವರ ಸಾವಿನ ನಂತರ ಪತ್ನಿ ಶಾರದಮ್ಮ ಅವರು ನೆಲೆಸುತ್ತಿದ್ದರು. ಈ ಮಧ್ಯೆ ಕಟ್ಟಡ ನಿರ್ಮಾಣವಾಗುತ್ತಿದ್ದು, ಪುತ್ತೂರು ಪುರಸಭೆಯಿಂದ ಮನೆ ನಂಬರುಗಳನ್ನು ಪಡೆಯಲಾಗಿತ್ತು. 1998-99 ರಲ್ಲಿ ಇದನ್ನು ಶಾರದಮ್ಮನವರಿಂದ ದೂರುದಾರರ ತಾಯಿಯಾದ ಜಯಶ್ರೀ ಹೊಳ್ಳ ಹೆಸರಿಗೆ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿರುವ ಕುರಿತು ವರದಿಯಾಗಿದೆ.

ಜಯಶ್ರೀ ಅವರು ನಿಧನ ಹೊಂದಿದ್ದು, ನಂತರ ದೂರುದಾರರು ದೇಗುಲಕ್ಕೆ ಸ್ಥಳ ಬಾಡಿಗೆ ನೀಡುತ್ತಿದ್ದಾರೆ. ಫೆ.3 ರಂದು ಶಾಸಕ ಅಶೋಕ್‌ ರೈ ಅವರ ಚಿತಾವಣೆ ಮೇರೆಗೆ ಈಶ್ವರ ಭಟ್‌ ಅವರು ತಮ್ಮ ಸಹಚರರ ಮೂಲಕ ಜೆಸಿಬಿ ಸಹಾಯದಿಂದ ಧ್ವಂಸ ಮಾಡಿರುತ್ತಾರೆ ಎಂದು ದೂರಿನಲ್ಲಿ ಹೇಳಲಾಗಿರುವ ಕುರಿತು ವರದಿಯಾಗಿದೆ.