ಪುತ್ತೂರು: ಅಕ್ರಮ ಲಾಟರಿ ಮಾರಾಟ, ಇಬ್ಬರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ಮಾಡಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
Sponsoredಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬುವವರು ಮಾರಾಟಕ್ಕೆಂದು ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಲಾಗಿದೆ. ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎನ್ನುವವರ ಬಳಿ ಮಾರಾಟಕ್ಕೆಂದು ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಲಾಗಿದೆ. ಕೇರಳದಿಂದ ಲಾಟರಿ ಟಿಕೆಟ್‌ಗಳನ್ನು ತಂದು ಟಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಒಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.




