# ಪುತ್ತೂರು | ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ಇಬ್ಬರ ಬಂಧನ

- Link: https://hosakannada.com/news/puttur-home-ride-by-police/
- Published: 2021-08-13T10:40:50+00:00
- Author: ಹೊಸಕನ್ನಡ

ಪುತ್ತೂರು: ಸಾಲ್ಮರ ಸಮೀಪದ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ
ತಿಳಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

Sponsored

ನಿನ್ನೆ ಮಧ್ಯ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದಾರೆ.

Advertisement

Advertisement

ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಯ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದೆ
ಎಂಬ ಮಾಹಿತಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ, ಅಕ್ರಮ ದನದ ಮಾಂಸ ಇರುವುದನ್ನು ಖಚಿತ
ಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
