121
ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರಂದು ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.


110/33/11 ಕೆ.ವಿ. ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಹಾಗೂ ವಾಟರ್ ಸಪ್ಲೈ ಫೀಡರ್ಗಳಲ್ಲಿ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.