Home News Putturu: ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಬಿಜೆಪಿ ಅಡ್ಡಿ-ಕಾಂಗ್ರೆಸ್‌ಗೆ ಅವಹೇಳನ : ಪುತ್ತೂರು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Putturu: ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಬಿಜೆಪಿ ಅಡ್ಡಿ-ಕಾಂಗ್ರೆಸ್‌ಗೆ ಅವಹೇಳನ : ಪುತ್ತೂರು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Hindu neighbor gifts plot of land

Hindu neighbour gifts land to Muslim journalist

Putturu: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿ ಅಭಿವೃದ್ಧಿಗೆ ಅಡ್ಡಿ ಪಡಿಸುತ್ತಿರುವ ಮತ್ತು ಪುತ್ತೂರಿನ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿರುವ ಶಾಸಕ ಅಶೋಕ್ ಕುಮಾರ್ ರೈರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೆ.7ರಂದು ಬೆಳಿಗ್ಗೆ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ ಮಾತನಾಡಿ, ಬಿಜೆಪಿಯವರು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ಎಂದು ಹೇಳಿಕೊಂಡು ದೇವಾಸ್ಥಾನದ ಅಭಿವೃದ್ಧಿಗೆ ಅಡ್ಡಿಪಡಿ ಮಾಡುತ್ತಿದ್ದಾರೆ. ಬಿಜೆಪಿಯ ಹಿಂದುತ್ವ, ಭಕ್ತಿ ಓಟು ಹಾಗೂ ಬ್ಯಾಲೆಟ್ ಪೇಪ‌ರ್ ಮೇಲೆ ಮಾತ್ರ ಇದೆ. ಬಿಜೆಪಿಯ ನಕಲಿ ಹಿಂದುತ್ವವನ್ನು ಜನರಿಗೆ ನಿರಂತರ ತಿಳಿಸುವ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್‌ ಮುಖಂಡ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಶ್ರೀಮಹಾಲಿಂಗೇಶ್ವರ ದೇವರ ನಂಬಿಕೆಗೆ ಕೈ ಹಾಕಿದರೆ ಬಿಜೆಪಿಯವರ ರಾಜಕಾರಣ ನಾಶವಾಗುತ್ತದೆ. ಬಿಜೆಪಿಯವರಿಗೆ ಮಹಾಲಿಂಗೇಶ್ವರ ದೇವರಿಗಿಂತ ರಾಜೇಶ್ ಬನ್ನೂರುರವರೇ ದೊಡ್ಡದಾ ಎಂದು ಪ್ರಶ್ನಿಸಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್‌ ಆಳ್ವ ಪ್ರಾಸ್ತಾವಿಕ ಮಾತನಾಡಿದರು.ನರಿಮೊಗರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು ಸ್ವಾಗತಿಸಿ, ವಂದಿಸಿದರು.