ಬೆಂಗಳೂರು: ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸವಾಲುಗಳ ಕುರಿತು ಸಮಗ್ರವಾಗಿ ಪರಿಶೀಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.
Sponsoredನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮಿತಿಯ ಸದಸ್ಯರಾಗಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿನ ಲೋಪಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ. ಪರೀಕ್ಷೆ ಹಾಗೂ ನೇಮಕಾತಿಗಳಿಗೆ ನಿಗದಿತ ವೇಳಾಪಟ್ಟಿ ರೂಪಿಸುವ ಬಗ್ಗೆಯೂ ಶಿಫಾರಸು ಮಾಡಲಿದೆ.
ಇದಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ಶಿಕ್ಷಣದ ವೆಚ್ಚದಿಂದ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಮಾರ್ಗಗಳನ್ನೂ ಸಮಿತಿ ಪರಿಶೀಲಿಸಲಿದೆ.
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಸುಧಾರಣೆ, ಶಿಕ್ಷಕರ ಕೊರತೆ ನಿವಾರಣೆ, ಪ್ರಯೋಗಾಲಯ, ಗ್ರಂಥಾಲಯ ಮತ್ತು ಹಾಸ್ಟೆಲ್ಗಳ ಅಭಿವೃದ್ಧಿಯ ಬಗ್ಗೆಯೂ ಸಮಿತಿ ಗಮನ ಹರಿಸಲಿದೆ.
ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಸಮಗ್ರವಾಗಿ ಅಧ್ಯಯನ ನಡೆಸಿ, ಅಗತ್ಯ ಸುಧಾರಣೆಗಳ ಕುರಿತು ಸರ್ಕಾರಕ್ಕೆ ಶಿಫಾರಸು ಸಲ್ಲಿಸುವ ಜವಾಬ್ದಾರಿಯನ್ನು ಉಪಸಮಿತಿ ಹೊಂದಿರಲಿದೆ.




