ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಅ.12 ರಂದು ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಇವರು ಮಾತನಾಡಿ ರೇಬೀಸ್ ರೋಗ ಹರಡಲು ಕಾರಣ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪಿಪಿಟಿ ಮತ್ತು ವಿಡಿಯೋ ಪ್ರದರ್ಶನಗಳ ಮೂಲಕ ಮಾಹಿತಿನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಭವಿತ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮವನ್ನು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಸಂಘಟಿಸಲಾಗಿತ್ತು.

