Home News Parliament: ಲೋಕಸಭೆಯಲ್ಲಿ ಪ್ರಿಯಾಂಕಾ ಕೆನ್ನೆ ಗಿಂಡಿದ ರಾಹುಲ್‌ ಗಾಂಧಿ – ಕ್ಲಾಸ್ ತೆಗೆದುಕೊಂಡ ಸ್ಪೀಕರ್...

Parliament: ಲೋಕಸಭೆಯಲ್ಲಿ ಪ್ರಿಯಾಂಕಾ ಕೆನ್ನೆ ಗಿಂಡಿದ ರಾಹುಲ್‌ ಗಾಂಧಿ – ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಓಂ ಬಿರ್ಲಾ !!

Hindu neighbor gifts plot of land

Hindu neighbour gifts land to Muslim journalist

Parliament : ಸದನದಲ್ಲಿ ರಾಜಕೀಯ ನಾಯಕರು ತುಂಬಾ ಗಂಭೀರತೆಯಿಂದ, ಉತ್ತಮ ನಡವಳಿಕೆಗಳಿಂದ ವರ್ತಿಸಬೇಕು. ನಿಯಮಗಳಿಗೆ ವಿರುದ್ಧವಾಗಿ ನಡೆದರೆ ಅದಕ್ಕೆ ಸ್ಪೀಕರ್ ತಕ್ಕ ಶಾಸ್ತಿ ಮಾಡುತ್ತಾರೆ. ಆದರೆ ಪ್ರತಿ ಬಾರಿಯೂ ಅಧಿವೇಶನ ನಡೆಯುವ ಸಂದರ್ಭದಲ್ಲಿ ಶಾಸಕರು, ಸಂಸದರು ತಾವು ತೋರುವ ದುರ್ವರ್ತನೆಗಳಿಂದ ಅಮಾನತು ಆಗುತ್ತಲೇ ಇರುತ್ತಾರೆ. ಇದು ಒಂದೆಡೆಯಾದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಆಗಾಗ ಒಂದಲ್ಲ ಒಂದು ಎಡವಟ್ಟು ಮಾಡುತ್ತಲೇ ಇರುತ್ತಾರೆ. ಸ್ಪೀಕರ್ ಹಲವು ಸಲ ಎಚ್ಚರಿಕೆ ಕೊಟ್ಟರು ಕೂಡ ಅವರು ಅದನ್ನು ತಿದ್ದುಕೊಳ್ಳುತ್ತಿಲ್ಲ.

ನರೇಂದ್ರ ಮೋದಿಯವರು ಮೊದಲ ಅವಧಿಗೆ ಪ್ರಧಾನಿಯಾದ ಸಂದರ್ಭದಲ್ಲಿ ಅಧಿವೇಶನದ ವೇಳೆ ರಾಹುಲ್ ಗಾಂಧಿಯವರು ಸೀದಾ ಎದ್ದುಕೊಂಡು ಮೋದಿಯವರನ್ನು ತಬ್ಬಿ ಹಿಡಿದಿದ್ದರು. ಇದು ಬಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಮತ್ತೊಂದು ಅಧಿವೇಶನದಲ್ಲಿ ಕಣ್ಣು ಹೊಡೆದು ವಿವಾದವನ್ನು ಸೃಷ್ಟಿಸಿಕೊಂಡಿದ್ದರು. ಆ ಬಳಿಕ ಸ್ಮೃತಿ ಇರಾನಿಗೆ ಫ್ಲೈಯಿಂಗ್‌ ಕಿಸ್‌ ನೀಡಿ ದೊಡ್ಡ ವಿವಾದ ಸೃಷ್ಟಿಸಿದ್ದರು. ಬಳಿಕ ಸಂಸತ್ತಿನಲ್ಲಿ ಈ ರೀತಿ ಮಾಡುವಂತಿಲ್ಲ ಇದು ನಿಯಮಬಾಹಿರ ಎಂದು ಸ್ಪೀಕರ್ ಎಚ್ಚರಿಕೆಯನ್ನು ನೀಡಿದ್ದರು. ಇದಾಗಿಯೂ ಇದೀಗ ರಾಹುಲ್ ಗಾಂಧಿಯವರು ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಯವರ ವರ್ತನೆಯನ್ನು ಕಂಡು ಸ್ಪೀಕರ್ ಓಂ ಬಿರ್ಲಾ ಅವರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಹೌದು, ಈಗ ರಾಹುಲ್‌ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆ ಗಿಂಟಿದ್ದಾರೆ. ಇದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಈ ವಿಡಿಯೋ ಗಮನಕ್ಕೆ ಬರುತ್ತಿದ್ದಂತೆ ಓಂ ಬಿರ್ಲಾ ಸದನದಲ್ಲಿಯೇ ರಾಹುಲ್‌ ಗಾಂಧಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು, ಸದನದ ಘನತೆಯನ್ನು ಎತ್ತಿಹಿಡಿಯುವ ಸಲುವಾಗಿ ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು ಪಾಲಿಸುವಂತೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ವೀಡಿಯೊವನ್ನು ಹಂಚಿಕೊಂಡ ಮಾಳವೀಯ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು, “ಲೋಕಸಭಾ ಸ್ಪೀಕರ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಮೂಲಭೂತ ಸಂಸದೀಯ ಶಿಷ್ಟಾಚಾರದ ಬಗ್ಗೆ ನೆನಪಿಸಬೇಕಾಗಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಈ ಬಾಲಿಶ ವ್ಯಕ್ತಿಯನ್ನು ನಮ್ಮ ಮೇಲೆ ಹೇರಿರುವುದು ನಿಜಕ್ಕೂ ದುರದೃಷ್ಟಕರ” ಎಂದು ಹೇಳಿದ್ದಾರೆ.

ವೀಡಿಯೊವನ್ನು ಹಂಚಿಕೊಂಡ ಬಿಜೆಪಿಯ ಮಾಳವೀಯ ಅವರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು, “ಲೋಕಸಭಾ ಸ್ಪೀಕರ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಮೂಲಭೂತ ಸಂಸದೀಯ ಶಿಷ್ಟಾಚಾರದ ಬಗ್ಗೆ ನೆನಪಿಸಬೇಕಾಗಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಈ ಬಾಲಿಶ ವ್ಯಕ್ತಿಯನ್ನು ನಮ್ಮ ಮೇಲೆ ಹೇರಿರುವುದು ನಿಜಕ್ಕೂ ದುರದೃಷ್ಟಕರ” ಎಂದು ಹೇಳಿದ್ದಾರೆ.