Home News V Somanna: ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬಾರದು – ಅಧಿಕಾರಿಗಳಿಗೆ ಸಚಿವ ಸೋಮಣ್ಣ...

V Somanna: ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬಾರದು – ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

Hindu neighbor gifts plot of land

Hindu neighbour gifts land to Muslim journalist

V Somanna: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ಕಳಚುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಹೇಳಿದ್ದರಿಂದ ಉಂಟಾಗಿದ್ದ ವಿವಾದದ ಕಿಡಿ ಆರುವ ಮುನ್ನವೇ, ರೈಲ್ವೆ ನೇಮಕಾತಿ ಮಂಡಳಿಯು ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ ಹಾಗೂ ಮಂಗಳಸೂತ್ರವನ್ನು ತೆಗೆದು ಪರೀಕ್ಷೆ ಬರೆಯಬೇಕು ಎಂದು ಮಾರ್ಗಸೂಚಿ ಹೊರಡಿಸಿತ್ತು. ಇದು ಬಾರಿ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ರೈಲ್ವೆ ಸಚಿವ ವಿ ಸೋಮಣ್ಣ ಅವರು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ (Mangal Sutra) ತೆಗೆಸಬಾರದು ಎಂದು ಸೂಚನೆ ನೀಡಿದ್ದಾರೆ.

ಹೌದು, ರೈಲ್ವೆ ನೇಮಕಾತಿ ಮಂಡಳಿಯ (Railway Recruitment Board) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ (Mangal Sutra) ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (V Somanna) ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಬ್ರಿಜೇಶ್ ಚೌಟ ಅವರು ಪ್ರತಿಕ್ರಿಯಿಸಿ ‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್​ಟಿಕೆಟ್​ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್​ ಸಂದೇಶದ ಮೂಲಕ ಸ್ಪಷ್ಟಪಡಿಸಿದ್ದಾರೆ.