ಸೋಮವಾರ, 26 ಅಕ್ಟೋಬರ್ 2026
Trending

ಕರಾವಳಿ ಸೇರಿದಂತೆ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Sponsored

ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ನಾಲ್ಕು ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಏ. 5 ಹಾಗೂ 6ರಂದು ಕೂಡ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.