Home News ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಇನ್ನಿಲ್ಲ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಇನ್ನಿಲ್ಲ

Hindu neighbor gifts plot of land

Hindu neighbour gifts land to Muslim journalist

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಸೀಮಸಾಬ ಹುಸೇನಸಾಬ ಬಿಜಾಪುರ(88) ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಬಿಜಾಪುರ ಕೊನೆ ಉಸಿರೆಳೆದಿದ್ದಾರೆ. ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದು ಜನಿಸಿದ್ದ ಕಾಹು 2003 ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು.

ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಜನಪ್ರತಿನಿಧಿಗಳಿಂದ ತೀವ್ರ ಸಂತಾಪ ವ್ಯಕ್ತವಾಗಿದೆ.