Home News Rakesh Poojary: ‘ಕಾಮಿಡಿ ಕಿಲಾಡಿ’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ- ಹೃದಯಘಾತದಿಂದ ನಿಧನ !!

Rakesh Poojary: ‘ಕಾಮಿಡಿ ಕಿಲಾಡಿ’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ- ಹೃದಯಘಾತದಿಂದ ನಿಧನ !!

Hindu neighbor gifts plot of land

Hindu neighbour gifts land to Muslim journalist

Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಹೃದಯಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆರೋಗ್ಯವಾಗಿದ್ದ ನಟ ರಾಕೇಶ್ ಪೂಜಾರಿ (Rakesh Poojary) ಅವರು ಸಣ್ಣ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬಾಳಿ ಬದುಕ ಬೇಕಿದ್ದ ಅವರು ಕೊನೆಯುಸಿರು ಎಳೆದಿದ್ದಾರೆ.

ಅಂದಹಾಗೆ ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು.