ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಇರುವ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಈ ರೀತಿಯ ಘಟನೆ ನಡೆಯಬಾರದು ಎಂದು ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ತೀರ್ಮಾನಿಸಿದ್ದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ.
ಹುಂಡಿ ಇರುವ ಸ್ಥಳ, ಹಣ ಎಣಿಕೆ ಸ್ಥಳ ಸೇರಿದಂತೆ ದೇವಸ್ಥಾನದ ಎಲ್ಲ ಭಾಗಗಳಲ್ಲಿ ಸಿಸಿಟಿವಿ ಹಾಕಲಾಗುತ್ತದೆ. ದೇಗುಲದ ಚಟುವಟಿಕೆಗಳ ಮೇಲೆ ದಿನದ 24 ಗಂಟೆ ನಿಗಾ ಇಡಲಾಗುತ್ತದೆ ಎಂದರು.




