ಸೋಮವಾರ, 26 ಅಕ್ಟೋಬರ್ 2026
Trending

ಕಾಲಿಗೆ ಬಿದ್ದರೂ ಕರಗದ ರಮ್ಯಾ; ‘ಕೇಸ್ ವಾಪಸ್ ಪಡೆಯಲ್ಲ’ ಎಂದ ನಟಿ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಸಂದೇಶ ಕಳುಹಿಸಿದ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳು ಮತ್ತು ಅವರ ಕುಟುಂಬಸ್ಥರು ರಮ್ಯಾ ಅವರ ಬಳಿ ಕ್ಷಮೆಯಾಚಿಸಿದ ಘಟನೆ ನಡೆದಿದೆ.
ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ಕೆಲ ಆರೋಪಿಗಳು ರಮ್ಯಾ ಅವರ ಕಾಲಿಗೆ ಬಿದ್ದು, ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಆರೋಪಿಗಳ ಕುಟುಂಬದವರೂ ಕೂಡ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ರಮ್ಯಾ ಅವರಲ್ಲಿ ವಿನಂತಿಸಿಕೊಂಡಿದ್ದಾರೆ.
ಆದರೆ, ಕ್ಷಮೆಯಾಚನೆಗೆ ಒಪ್ಪದ ರಮ್ಯಾ, ಸಾಮಾಜಿಕ ಜಾಲತಾಣದಲ್ಲಿ ಯಾರನ್ನಾದರೂ ಅವಾಚ್ಯವಾಗಿ ನಿಂದಿಸುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. ಪ್ರಕರಣವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೈಬರ್ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣದ ಟ್ರೋಲಿಂಗ್ ವಿರುದ್ಧ ತಮ್ಮ ಕಾನೂನು ಹೋರಾಟ ಮುಂದುವರಿಸುವುದಾಗಿ ರಮ್ಯಾ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

Sponsored
Advertisement